ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ತಮ್ಮ ಚುನಾವಣಾ ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದಾರೆ.
ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಅವರು, 2028 ರ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿರುವುದಾಗಿದೆ.
ಕೆಲ ಸಮಯದ ಹಿಂದಷ್ಟೇ ಅಹಿಂದ ನಾಯಕ ಸಿದ್ದರಾಮಯ್ಯ ಅವರು ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೈಕಮಾಂಡ್ ಸೂಚನೆಗೆ ತಲೆಬಾಗಿದ ಅವರು ತಮ್ಮ ಎರಡನೇ ಅವಧಿಯ ಮುಖ್ಯಮಂತ್ರಿಗಿರಿಗೆ ರಾಜೀನಾಮೆ ನೀಡಿದ್ದರು. ಇದೀಗ ಅವರು ತಮ್ಮ ಚುನಾವಣಾ ರಾಜಕೀಯಕ್ಕೂ ನಿವೃತ್ತಿ ಘೋಷಣೆ ಮಾಡುವ ಮೂಲಕ ಅವರ ಅಭಿಮಾನಿಗಳಿಗೆ ಮತ್ತೊಮ್ಮೆ ಶಾಕ್ ನೀಡಿದ್ದಾರೆ.

