ಉಡುಪಿ: ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡರು, ನಿನ್ನೆ ನಡೆದ ಬಿಜೆಪಿಯ ಪ್ರತಿಭಟನಾ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ಅವಮಾನ ಮಾಡಿರುವ ಬಗ್ಗೆ ಮತ್ತು ಇನ್ನಿತರ ವಿಷಯಗಳ ಬಗ್ಗೆ ಪ್ರಸ್ತಾಪಿಸಲಾಗಿದೆ.
ದೂರು ದಾಖಲಿಸುವ ವೇಳೆ ಕಾಂಗ್ರೆಸ್ ಮುಖಂಡರಾದ ಅಶೋಕ್ ಕುಮಾರ್ ಕೊಡವೂರ್, ವಿನಯ್ ಕುಮಾರ್ ಸೊರಕೆ, ಪ್ರಸಾದ್ ರಾಜ್ ಕಾಂಚನ್, ಹರೀಶ್ ಶೆಟ್ಟಿ, ಶರತ್ ಕುಂದರ್, ಸುಕೇಶ್, ನಬಿಲ್ ಹಾಗೂ ರಾಹುಲ್ ಸೇರಿದಂತೆ ಹಲವು ಕಾರ್ಯಕರ್ತರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಉಪಸ್ಥಿತರಿದ್ದರು.
ದೂರಿನ ಸಂಬಂಧ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

