
ಮಂಗಳೂರು: ಸಾಮೂಹಿಕ ಅತ್ಯಾಚಾರ ನಡೆಸಿದ ಅಪರಾಧಿಗಳಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 74 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಈ ಅತ್ಯಾಚಾರ ಪ್ರಕರಣ 2018 ರಲ್ಲಿ ನಡೆದಿದ್ದಾಗಿದ್ದು ಆರೋಪಿಗಳಾದ ಪ್ರಜ್ವಲ್, ಅರುಣ್ ಅಮೀನ್, ಆದಿತ್ಯ ಸಾಲ್ಯಾನ್, ಅಬ್ದುಲ್ ರಿಯಾಜ್ಗೆ ಶಿಕ್ಷೆ ಮತ್ತು ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿರುವುದಾಗಿದೆ.
ಪ್ರಕರಣದ ಹಿನ್ನೆಲೆ:
ನವೆಂಬರ್ 18, 2018 ರಲ್ಲಿ ಯುವತಿಯೋರ್ವಳು ತನ್ನ ಗೆಳೆಯನ ಜೊತೆ ಬೀಚ್ಗೆ ಬಂದಿದ್ದಳು. ಆಕೆಯನ್ನು ಮೂವರು ಅಪ್ರಾಪ್ತ ಬಾಲಕರನ್ನೊಳಗೊಂಡ ಹಾಗೆ ಏಳು ಜನರು ಅತ್ಯಾಚಾರ ಮಾಡಿದ್ದರು. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ್ದಾರೆ. ಪ್ರಕರಣದ ಉಳಿದ ಮೂವರು ಅಪ್ರಾಪ್ತ ವಯಸ್ಸಿನ ಅಪರಾಧಿಗಳ ವಿಚಾರಣೆ ಬಾಲ ನ್ಯಾಯಮಂಡಳಿಯಲ್ಲಿ ನಡೆಯುತ್ತಿದೆ.

