ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ಮಳೆಗಾಳಿಯ ಆರ್ಭಟಕ್ಕೆ ವ್ಯಕ್ತಿಯೊಬ್ಬರು ದುರ್ಮರಣ ಹೊಂದಿದ್ದಾರೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ 66 ವರ್ಷದ ಯಾದವ ಗೌಡ ಅವರ ಮೇಲೆ ಏಕಾಏಕಿ ಅಡಿಕೆಮರ ಮುರಿದು ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಳೆ ಮತ್ತು ಬಿರುಗಾಳಿಯಿಂದ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಗಣೇಶ್ ಸವಣೂರ, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

