ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಕಾನ್ಸ್ಟೆಬಲ್ ಹಹುದ್ದೆ ಭರ್ತಿಗೆ ಪರೀಕ್ಷೆ ನಡೆಸಲು ಸರ್ಕಾರ ಸಿದ್ಧತೆ ಮಾಡುತ್ತಿದೆ. ಈ ಪರೀಕ್ಷೆ ಸುಸೂತ್ರವಾಗಿ ನಡೆಯಬೇಕು ಎನ್ನುವ ಕಾರಣಕ್ಕೆ ಗೃಹ ಸಚಿವಾಲಯ ಮುತುವರ್ಜಿಯಿಂದ ಕೆಲಸ ಮಾಡುತ್ತಿದೆ.
ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಧಾರ್ಮಿಕ ಉಡುಪುಗಳ ಬಗ್ಗೆ ಗೊಂದಲವಾಗದಂತೆ ಎಚ್ಚರ ವಹಿಸುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಾದರೆ ಹಿಜಾಬ್ ಧರಿಸಿವಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಹಾಗೆಯೇ ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳು ಏನನ್ನು ಧರಿಸಬಹುದು, ಏನನ್ನು ಧರಿಸಬಾರದು ಎನ್ನುವ ಬಗ್ಗೆಯೂ ಅಂತಿಮ ಪರೀಕ್ಷಾ ಪತ್ರದಲ್ಲಿ ಸೂಚಿಸಲಾಗುತ್ತದೆ. ಇದರಿಂದ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಮೇಲ್ವಿಚಾರಕರು ಸಹ ಮೊಬೈಲ್ ಬಳಕೆ ಮಾಡುವಂತಿಲ್ಲ. ಹಾಗೆಯೇ ಖಾಸಗಿ ತರಬೇತಿ ಕೇಂದ್ರಗಳ ಮೇಲೂ ನಿಗಾ ವಹಿಸಲಾಗುವುದು ಎಂದಿದ್ದಾರೆ.

