ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಹೋಮ್ ನರ್ಸ್ ಹೆಸರಲ್ಲಿ ಭಾರೀ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಆರೈಕೆಗಾಗಿ ಹೋಮ್ ಬ್ರದರ್ ಆಗಿ ಬಂದಿದ್ದ ಸಚಿನ್ ಎಂಬಾತ, ರೋಗಿಯ ಗಮನಕ್ಕೆ ಬಾರದೆ ಅವರ ಬ್ಯಾಂಕ್ ಆಫ್ ಬರೋಡಾ ಖಾತೆಯಿಂದ ಯುಪಿಐ ಮೂಲಕ ಹಂತ ಹಂತವಾಗಿ ₹1 ಲಕ್ಷ 60 ಸಾವಿರ 500 ರೂಪಾಯಿ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿ ಕೇರ್ ಹೋಮ್ ನರ್ಸ್ ಸಂಸ್ಥೆಯ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿದಿದೆ.

