ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಇಂದಿರಾ ನಗರದಲ್ಲಿ ಭಾರಿ ಗುಡ್ಡ ಕುಸಿತ ಸಂಭವಿಸಿ, ಒಂದೇ ಕುಟುಂಬದ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಇದುವರೆಗೆ ಒಂದು ಮೃತದೇಹವನ್ನು ಹೊರತೆಗೆದಿದ್ದು, ಉಳಿದ ಇಬ್ಬರ ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪತ್ತೆಯಾದ ಮೃತದೇಹವನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯ ಸ್ಥಳದಲ್ಲಿ ಮುಂದುವರಿದಿದೆ.

