ಮಂಗಳೂರು: ಚಿಕಿತ್ಸೆ ಪಡೆಯಲು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದು, ಅವರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಳ್ಳತನವಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾನಕಿ (53) ಅವರಿಗೆ ಜು. 26 ರಂದು ಬೆಳಗ್ಗೆ ಹೃದಯಾಘಾತ ಸಂಭವಿಸಿತ್ತು. ಅವರನ್ನು ಚಿಕಿತ್ಸೆಗಾಗಿ ಮೊದಲು ಖಾಸಗಿ ಆಸ್ಪತ್ರೆಗೆ ಮತ್ತು ನಂತರದಲ್ಲಿ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು.
ಬಳಿಕ ಶವದ ಪರಿಶೀಲನೆ ಮಾಡಲಾಗಿದ್ದು, ಈ ವೇಳೆ ಅವರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಾಣೆಯಾಗಿದೆ. ಅದರ ಮೌಲ್ಯ ಸುಮಾರು ಒಂದೂವರೆ ಲಕ್ಷ ಎಂದು ಅಂದಾಜಿಸಲಾಗಿದೆ.

