ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಬಾರ್ ಹಾಗೂ ಪಬ್ಗಳ ಮೇಲೆ ಪೊಲೀಸರು ನಡೆಸಿದ ದಾಳಿಯಲ್ಲಿ 21 ವರ್ಷಕ್ಕಿಂತ ಕಡಿಮೆ ವಯಸ್ಸಿನ 64 ಯುವಕರು, 23 ಯುವತಿಯರು ಹಾಗೂ 17 ವರ್ಷದ ಓರ್ವ ಅಪ್ರಾಪ್ತ ಬಾಲಕ ಮದ್ಯ ಸೇವಿಸುತ್ತಿರುವುದು ಪತ್ತೆಯಾಗಿದೆ.
ಪೊಲೀಸ್ ಅಧೀಕ್ಷಕರ ಸೂಚನೆಯಂತೆ 6 ತಂಡಗಳಾಗಿ 50ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, 6 ಬಾರ್ ಮತ್ತು ಪಬ್ಗಳ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಪರವಾನಗಿ ಅಮಾನತಿಗೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ಮುಂದೆಯೂ ಇಂತಹ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

