ಶಿವಮೊಗ್ಗ ನಗರದಲ್ಲಿ ನಡೆದ ದುರಂತ ಘಟನೆಯಲ್ಲಿ, ದತ್ತಾತ್ರೇಯ ಸ್ವಾಮಿ ದೇವಸ್ಥಾನದ ಲಿಫ್ಟ್ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ನಿವೃತ್ತ ಇಂಜಿನಿಯರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತರನ್ನು 80 ವರ್ಷದ ಕುಮಾರಸ್ವಾಮಿ ಎಂದು ಗುರುತಿಸಲಾಗಿದೆ. ಭಾನುವಾರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಲಿಫ್ಟ್ನಲ್ಲಿ ಮೇಲಕ್ಕೆ ತೆರಳಲು ಬಟನ್ ಒತ್ತಿ ಒಳಗೆ ಪ್ರವೇಶಿಸಿದ ಸಂದರ್ಭದಲ್ಲಿ, ಮೇಲಿನಿಂದ ಬಂದ ಲಿಫ್ಟ್ನಲ್ಲಿ ಅವರು ಸಿಲುಕಿಕೊಂಡಿದ್ದರು ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕುಮಾರಸ್ವಾಮಿಯವರನ್ನು ಸುರಕ್ಷಿತವಾಗಿ ಹೊರತೆಗೆದರು. ಬಳಿಕ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

