ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಸಚಿವ ಸಂಪುಟ ವಿಸ್ತರಣೆ ಮಾಡಿದ ಬೆನ್ನಲ್ಲೇ, ಸಚಿವ ಸ್ಥಾನ ಸಿಗದವರಿಂದ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನಕ್ಕೆ ಆಸೆ ಹೊಂದಿದ್ದವರು ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.
ಇದರ ಬೆನ್ನಲ್ಲೇ ಸಿಎಂ ಡಿ.ಕೆ.ಶಿ. ಅತೃಪ್ತರ ಬೆದರಿಕೆಗೆ ತಕ್ಕ ಪ್ರತ್ಯುತ್ತರ ನೀಡಿದ್ದು, ರಾಜೀನಾಮೆ ನೀಡಿದ ಎರಡೇ ನಿಮಿಷದಲ್ಲಿ ಅದನ್ನು ಅಂಗೀಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವ್ಯಕ್ತಿಗಿಂತ ಪಕ್ಷ ದೊಡ್ಡದು. ಪಕ್ಷದಲ್ಲಿ ಶಿಸ್ತು ಮುಖ್ಯ. ನನಗೆ ಈ ಹಿಂದೆ ಸಚಿವ ಸ್ಥಾನ ಸಿಗದೇ ಇದ್ದಾಗ ನಾನು ರಾಜೀನಾಮೆ ನೀಡುತ್ತೇನೆ ಎಂದು ಮಾಧ್ಯಮಗಳ ಮುಂದೆ ಹೇಳಿದ್ದೇನಾ? ಎಂದು ಅತೃಪ್ತರ ವಿರುದ್ಧ ಗರಂ ಆಗಿದ್ದಾರೆ. ರಾಜಕೀಯದಲ್ಲಿ ತಾಳ್ಮೆ ಇರಬೇಕು. ನಾನು ತಾಳ್ಮೆ ಕಳೆದುಕೊಂಡಿದ್ದೇನಾ? ಎಲ್ಲರೂ ಹಾಗೆಯೇ ತಾಳ್ಮೆಯಿಂದ ಇರಬೇಕು. ರಾಜೀನಾಮೆ ಕೊಟ್ಟರೆ ಅದನ್ನು ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದಾಗಿ ಅವರು ಖಡಕ್ ಆಗಿ ಹೇಳಿದ್ದಾರೆ.

