ಕಾರ್ಕಳ: ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣದಿಂದ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಕುಸಿತದ ಭಯ ಆರಂಭವಾಗಿದೆ.
ರೆಂಜಾಳ ಗ್ರಾಮದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ ಎಂದೇ ಹೇಳಬಹುದು. ಇಲ್ಲಿನ ಹೆಡ್ಮೆ ಹರಿಪ್ರಸಾದ್ ಎಂಬವರ ಮನೆಯ ಸಮೀಪ ಭೂಕುಸಿತ ಉಂಟಾಗಿದ್ದು, ಸದ್ಯ ಆ ಮನೆಯವರನ್ನು ಸುರಕ್ಷತಾ ದೃಷ್ಟಿಯಿಂದ ಹತ್ತಿರದ ಶಾಲೆಯಲ್ಲಿ ವಾಸ್ತವ್ಯ ಹೂಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಡಿ.ಸಿ. ಸ್ವರೂಪ ಟಿ.ಕೆ., ತಹಶೀಲ್ದಾರ್ ಪ್ರದೀಪ್ ಆರ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಜೊತೆ ಚರ್ಚೆ ನಡೆಸಿರುವ ಅವರು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ, ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪರಿಸ್ಥಿತಿಯ ಅಧ್ಯಯನಕ್ಕಾಗಿ ಭೂ ವಿಜ್ಞಾನಿಗಳು ನಾಳೆ ರೆಂಜಾಳಕ್ಕೆ ನೀಡಲಿದ್ದಾರೆ.

