ಮಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವಪ್ರಚೋದನಾಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಮ್ಮದ್ ರಿಯಾಸ್ ಫರಂಗಿಪೇಟೆಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.
ಜುಲೈ 23, 2015 ರಲ್ಲಿ ಪಿಎಫ್ಐ ಬೆಳ್ತಂಗಡಿಯ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರಿಯಾಸ್ ಫರಂಗಿಪೇಟೆ ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವಂತೆ ಭಾಷಣ ಮಾಡಿದ್ದ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಅಂತ್ಯಗೊಂಡು ಆರೋಪಿಯ ವಿರುದ್ಧ ಆರೋಪಗಳು ಸಾಬೀತಾದ ಹಿನ್ನೆಲೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿರುವುದಾಗಿದೆ.

