ಮಂಗಳೂರು: ನಗರದ ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ರ್ಯಾಗಿಂಗ್ ಮತ್ತೆ ಸದ್ದು ಮಾಡಿದೆ. ಇಬ್ಬರು ಜ್ಯೂನಿಯರ್ ವಿದ್ಯಾರ್ಥಿಗಳ ವಿರುದ್ಧ ಆರು ಮಂದಿ ಸೀನಿಯರ್ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದ್ದು, ಆರೋಪಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಥಮ ವರ್ಷದ ಆದರ್ಶ್ ಮತ್ತಿ ಜಾಸಿನ್ ಎಂಬ ವಿದ್ಯಾರ್ಥಿಗಳು ಕಪ್ಪು ಶೂ ಧರಿಸಿದ್ದನ್ನೇ ನೆಪವಾಗಿಸಿ, ದ್ವಿತೀಯ ಲಾಜಿಸ್ಚಿಕ್ ವಿಭಾಗದ ಆರು ಮಂದಿ ವಿದ್ಯಾರ್ಥಿಗಳು ಜಗಳ ತೆಗೆದು, ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳ ಹೇಳಿಕೆಯನ್ನು ಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ.

