ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಸಾಲು ಸಾಲು ಹಬ್ಬ ಹರಿದಿನಗಳು ಆರಂಭವಾಗುತ್ತವೆ. ಸೆ. 14 ರಂದು ಗಣೇಶ ಚತುರ್ಥಿ ಹಬ್ಬವಾಗಿದ್ದು, ಪಿಒಪಿ, ರಾಸಾಯನಿಕ ಬಣ್ಣಗಳನ್ನು ಲೇಪಿಸಿದ ಗಣಪತಿ ವಿಗ್ರಹಗಳನ್ನು ಬಳಕೆ ಮಾಡದಂತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಪರಿಸರ ಸ್ನೇಹಿ ಕಂಪನ ಮೂರ್ತಿಗಳನ್ನು ಬಳಸಿ ಹಬ್ಬ ಮಾಡುವಂತೆ ಅವರು ತಿಳಿಸಿದ್ದಾರೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಅವರು ಲಿಖಿತ ಸೂಚನೆ ನೀಡಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಲ ಮೂಲ ಗಳ ಸಂರಕ್ಷಣಾ ದೃಷ್ಟಿಯಿಂದ ಮಣ್ಣಿನಿಂದ ತಯಾರಿಸಿದ ವಿಗ್ರಹಗಳ ಬಳಕೆಗೆ ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಮೂರ್ತಿಗಳನ್ನು ತಯಾರಿಸುವಂತೆ ಹೇಳಿದ್ದಾರೆ. ಗ್ರಾಮ ಪಂಚಾಯತ್ ಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರ ಪಡೆದು ಜನಜಾಗೃತಿ ಮೂಡಿಸುವಂತೆ ಅವರು ಹೇಳಿದ್ದಾರೆ.

