ಮಂಗಳೂರು: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಹೊಸ ನಿಯಮವೊಂದನ್ನು ರೂಪಿಸಿದೆ.
ಈ ಬಗ್ಗೆ ಆರೋಗ್ಯ ಸಚಿವ ಯು. ಟಿ. ಖಾದರ್ ಮಾತನಾಡಿದ್ದು, ತುರ್ತು ಸಂದರ್ಭಗಳಲ್ಲಿ ರಾಜ್ಯದ ಗ್ರಾಮೀಣ ಭಾಗಗಳಿಂದ ರೋಗಿಗಳನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆ್ಯಂಬುಲನ್ಸ್ಗಳು 15 ರಿಂದ 20 ನಿಮಿಷಗಳ ಒಳಗಾಗಿ ತಲುಪಬೇಕು. ಈ ಉದ್ದೇಶದಿಂದ ರಾಜ್ಯದಲ್ಲಿ 800 ಹೊಸ ಆ್ಯಂಬುಲನ್ಸ್ ಗಳನ್ನು ಹೊಸ ನಿಯಮಗಳ ಜೊತೆಗೆ ಆರಂಭ ಮಾಡಲು ಸಿದ್ಧತೆ ನಡೆಸಿದೆ. ಸೂಚಿತ ಸಮಯದಲ್ಲಿ ತಾಲೂಕು ಆಸ್ಪತ್ರೆಗೆ ತಲುಪದೇ ಹೋದಲ್ಲಿ ಆ ಆ್ಯಂಬುಲನ್ಸ್ ಸಿಬ್ಬಂದಿಗೆ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಸರ್ಕಾರಿ ವೈದ್ಯರ ಕೊರತೆ ಇದ್ದು, ವೈದ್ಯರ ನೇಮಕ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿದ್ದಾರೆ. ಹಂತ ಹಂತವಾಗಿ ವೈದ್ಯರ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

