ಉಡುಪಿ: ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ದುಷ್ಕರ್ಮಿಗಳ ಗುಂಡೇಟಿಗೆ ಬಲಿ ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆಗೈದಿದ್ದಾರೆ.
ಮಧ್ಯಾಹ್ನ ವಾಹನವೊಂದರಲ್ಲಿ ಆಗಮಿಸಿದ ಇಬ್ಬರು ಅಜ್ಞಾತ ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

