ಉಡುಪಿ ಶ್ರೀಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ ನೀಡಿ, ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ-ಮಂತ್ರಾಕ್ಷತೆ ಪಡೆದು ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ದಿವಾನ ಉದಯಕುಮಾರ್ ಸರಳತ್ತಾಯ, ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪ್ವೆಲ್, ಜಿಲ್ಲಾ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್., ಜಿಲ್ಲಾ ಅಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಜಿಲ್ಲಾ ಸಂಯೋಜಕ ಚೇತನ್ ಪೆರಲ್ಕೆ ಹಾಗೂ ಬಿಜೆಪಿ ಜಿಲ್ಲಾ ವಕ್ತಾರ ಮಧುಕರ್ ಮುದ್ರಾಡಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

