ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ದೊರೆತಿದೆ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ದೇಶದ ವಿವಿಧ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿನ ಕಸ್ಟಮರ್ ಸರ್ವಿಸ್ ಅಸೋಸಿಯೇಟ್ (CSA/ಕ್ಲರ್ಕ್) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 11,403 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ಪೈಕಿ ಕರ್ನಾಟಕದಲ್ಲೇ 1,414 ಹುದ್ದೆಗಳು ಭರ್ತಿಯಾಗಲಿವೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯದಿಂದ ಪದವಿ (Degree) ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ವಯೋಮಿತಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ನಿಗದಿಪಡಿಸಲಾಗಿದ್ದು, ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರಲಿದೆ. ಅರ್ಜಿ ಶುಲ್ಕವಾಗಿ ಎಸ್ಸಿ/ಎಸ್ಟಿ/ವಿಶೇಷ ಚೇತನ ಅಭ್ಯರ್ಥಿಗಳಿಗೆ ₹175 ಹಾಗೂ ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ₹850 ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯ ಮೂಲಕ ನಡೆಯಲಿದ್ದು, ಈ ಹುದ್ದೆಗಳಿಗೆ ಅಕ್ಟೋಬರ್ 10 ಮತ್ತು 11 ರಂದು ಪೂರ್ವಭಾವಿ ಪರೀಕ್ಷೆ (Prelims) ಹಾಗೂ ಡಿಸೆಂಬರ್ 27 ರಂದು ಮುಖ್ಯ ಪರೀಕ್ಷೆ (Mains) ನಡೆಯಲಿದೆ. 2027 ರ ಮಾರ್ಚ್ನಲ್ಲಿ ಅಂತಿಮ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 21-08-2026 ಕೊನೆಯ ದಿನಾಂಕವಾಗಿದೆ.
ಕರ್ನಾಟಕದಲ್ಲಿ ಭರ್ತಿಯಾಗಲಿರುವ 1,414 ಹುದ್ದೆಗಳಲ್ಲಿ ಪ್ರಮುಖವಾಗಿ ಕೆನರಾ ಬ್ಯಾಂಕ್ನಲ್ಲಿ 800, ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ 234, ಬ್ಯಾಂಕ್ ಆಫ್ ಬರೋಡಾದಲ್ಲಿ 180, ಇಂಡಿಯನ್ ಓವರ್ಸೀಸ್ ಬ್ಯಾಂಕ್ನಲ್ಲಿ 61, ಬ್ಯಾಂಕ್ ಆಫ್ ಇಂಡಿಯಾದಲ್ಲಿ 40, ಇಂಡಿಯನ್ ಬ್ಯಾಂಕ್ನಲ್ಲಿ 40, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 29, ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 17 ಹಾಗೂ ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್ನಲ್ಲಿ 5 ಹುದ್ದೆಗಳು ಖಾಲಿ ಇವೆ. ಹೆಚ್ಚಿನ ವಿವರಗಳಿಗೆ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ibps.in ಗೆ ಭೇಟಿ ನೀಡಬಹುದು.

