ಬ್ರಹ್ಮಾವರ: ಸ್ಥಳೀಯ ಫಾರ್ಚೂನ್ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್, ಬ್ರಹ್ಮಾವರ ಸಂಸ್ಥೆಯ ಆಶ್ರಯದಲ್ಲಿ ಮತ್ತು ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ಉಚಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಬ್ರಹ್ಮಾವರದ ಕಾಲೇಜು ಸಭಾಂಗಣದಲ್ಲಿ ಆಗಸ್ಟ್ 12, 2026 ರಂದು ಬೆಳಿಗ್ಗೆ 9:00 ಗಂಟೆಗೆ ಈ ಕಾರ್ಯಕ್ರಮ ಚಾಲನೆಗೊಳ್ಳಲಿದೆ.
ಈ ರಕ್ತದಾನ ಶಿಬಿರವನ್ನು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ ಕೇಂದ್ರ ಕುಂದಾಪುರ, ಲಯನ್ಸ್ ಕ್ಲಬ್ ಬ್ರಹ್ಮಗಿರಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮೂಡಹಡು ಪಾಂಡೇಶ್ವರ ಹಾಗೂ ಸಾಮ್ರಾಜಿನಿ ಆಟೋ ಚಾಲಕರ ಸಂಘ ಮಾಬುಕಳ ಇವುಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

“ರಕ್ತದಾನ ಮಾಡಿ – ಜೀವ ಉಳಿಸಿ”:
ನೀವು ನೀಡುವ ಒಂದು ಯುನಿಟ್ ರಕ್ತವು ಇನ್ನೊಬ್ಬರ ಜೀವ ಉಳಿಸಲು ನೆರವಾಗುತ್ತದೆ. ಈ ಉದಾತ್ತ ಕಾರ್ಯದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕೋರಿದ್ದಾರೆ.

