ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ ಶುಭ ಸುದ್ದಿ. ಬ್ರಹ್ಮಾವರದ ಖಾಸಗಿ ಕಂಪನಿಯೊಂದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಸಂಸ್ಥೆಯಲ್ಲಿ ಒಟ್ಟು 4 ಟೆಲಿಕಾಲರ್ (Telecaller) ಹುದ್ದೆಗಳು ಖಾಲಿ ಇದ್ದು, ಇವುಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಬ್ಬರೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರೊಂದಿಗೆ 2 ಟೆಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ (Tele Marketing Executive) ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಪುರುಷ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಯಾವುದೇ ಪೂರ್ವನುಭವವಿಲ್ಲದ ಹೊಸಬರು (Freshers) ಹಾಗೂ ಈ ಕ್ಷೇತ್ರದಲ್ಲಿ ಅನುಭವ ಹೊಂದಿರುವ (Experienced) ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಂಸ್ಥೆಯು ವೃತ್ತಿಪರ ತರಬೇತಿ ನೀಡಲಿದ್ದು, ಉತ್ತಮ ಮಾಸಿಕ ವೇತನದೊಂದಿಗೆ ಆಕರ್ಷಕ ಇನ್ಸೆಂಟಿವ್ಸ್ ಹಾಗೂ ವೃತ್ತಿಜೀವನದಲ್ಲಿ ಬೆಳೆಯಲು ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಡಲಾಗುತ್ತದೆ. ಸಂಸ್ಥೆಯ ಯಶಸ್ಸಿನ ಭಾಗವಾಗಲು ಬಯಸುವ ಹಾಗೂ ಈ ಉದ್ಯೋಗಾವಕಾಶದಲ್ಲಿ ಆಸಕ್ತಿಯಿರುವ ಅಭ್ಯರ್ಥಿಗಳು ತಕ್ಷಣವೇ 96635 79219 ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆಯಬಹುದು.

