ಬೆಂಗಳೂರು: ರಾಜ್ಯದ ಹೈಕೋರ್ಟ್ಗೆ ನೂತನವಾಗಿ ನೇಮಕವಾದ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಮೂರ್ತಿಗಳಾದ ರಾಘವೇಂದ್ರ ಸೀತಾರಾಮ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ಥಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ್ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿಭೂಷಣ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕರ್ನಾಟಕದ ಹೈಕೋರ್ಟ್ಗೆ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳು ಮಂಜೂರಾಗಿವೆ. ಸದ್ಯ ಮುಖ್ಯ ನ್ಯಾಯಮೂರ್ತಿ ಸೇರಿ ಒಟ್ಟು 48 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಆರು ಹೊಸ ನ್ಯಾಯಮೂರ್ತಿಗಳ ನೇಮಕವಾಗಿದ್ದುೊ ಆ ಮೂಲಕ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿದೆ. ಆ 54 ಜನರಲ್ಲಿ 11 ಮಂದಿ ಮಹಿಳಾ ನ್ಯಾಯಮೂರ್ತಿಗಳಿದ್ದಾರೆ. 8 ನ್ಯಾಯಮೂರ್ತಿಗಳ ಸ್ಥಾನಗಳು ಇನ್ನೂ ಖಾಲಿ ಉಳಿದಿವೆ.

