ಶಿವಮೊಗ್ಗ: ಶಾಲಾ ಶಿಕ್ಷಣ ಇಲಾಖೆಯು ಶಿವಮೊಗ್ಗ ಜಿಲ್ಲೆಯ ಏಳು ತಾಲೂಕುಗಳ ಬಿ.ಆರ್.ಸಿ. ಕೇಂದ್ರಗಳಲ್ಲಿ 2026-27ನೇ ಸಾಲಿಗೆ 6 ತಿಂಗಳ ತಾತ್ಕಾಲಿಕ ಅವಧಿಗೆ ‘ಮಾನಸಿಕ ಆರೋಗ್ಯ ಸಲಹೆಗಾರ/ಸಮಾಲೋಚಕರ’ ಹುದ್ದೆಗಳ ಭರ್ತಿಗೆ 28 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ:
ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂ.ಎ. ಅಥವಾ ಎಂ.ಎಸ್ಸಿ ಪದವಿ ಪೂರ್ಣಗೊಳಿಸಿದ್ದರೆ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ:
ಮಾಸಿಕ ವೇತನ ರೂ. 40,000 ಮತ್ತು ಪ್ರಯಾಣ ಭತ್ಯೆಯಾಗಿ ರೂ. 10,000 ನೀಡಲಾಗುತ್ತದೆ.
ಆಸಕ್ತರು ಅರ್ಜಿ ನಮೂನೆಯನ್ನು ‘ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ’ಯಿಂದ ಪಡೆದುಕೊಳ್ಳಬಹುದಾಗಿದೆ. ತುಂಬಿದ ಅರ್ಜಿಗಳನ್ನು ಆ. 17 ರ ಮೊದಲು ಸಲ್ಲಿಕೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

