ಪುತ್ತೂರು: ಮಂತ್ರಾಲಯದಿಂದ ಮಂಗಳೂರಿಗೆ ವಾಪಸ್ ಆಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತರನ್ನು ಪುತ್ತೂರಿನ ಬೆಳಿಯೂರುಕಟ್ಟೆ ನಿವಾಸಿ, ಪ್ರಸ್ತುತ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಆಗಸ್ಟ್ 9ರಂದು ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳಿದ್ದ ಅವರು, ವಾಪಸ್ ಪ್ರಯಾಣದ ವೇಳೆ ಆಗಸ್ಟ್ 10ರ ರಾತ್ರಿ ಬಳ್ಳಾರಿಯ ಎಪಿಎಂಸಿ ಬಸ್ ನಿಲ್ದಾಣದಲ್ಲಿ ಇಳಿದು ಕುಳಿತಿದ್ದರು. ಮುಂಜಾನೆ 4 ಗಂಟೆ ಸುಮಾರಿಗೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸಹ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಿಸಿಟಿವಿ ಪರಿಶೀಲನೆ ಬಳಿಕ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಮೃತದೇಹವನ್ನು ಊರಿಗೆ ತರಲು ಕುಟುಂಬಸ್ಥರು ಅಗತ್ಯ ಕ್ರಮ ಕೈಗೊಂಡಿದ್ದಾರೆ.

