ಬೆಂಗಳೂರು: ಕೆಸೆಟ್ (ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ) ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಸೆ. 5 ಕೊನೆಯ ದಿನವಾಗಿದ್ದು, ಸೆ. 6 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಮಾಹಿತಿ ನೀಡಿದ್ದು, ಪ್ರವೇಶ ಪತ್ರ ಅಕ್ಟೋಬರ್ 1 ರಂದು ದೊರೆಯಲಿದೆ. ಕೆಸೆಟ್ ಲಿಖಿತ ಪರೀಕ್ಷೆ ಅಕ್ಟೋಬರ್ 11 ರಂದು ನಡೆಯಲಿದೆ. ಪ್ರಸಕ್ತ ಸಾಲಿನ ಕೆಸೆಟ್ ಪರೀಕ್ಷೆಯನ್ನು ಒಟ್ಟು 37 ವಿಷಯಗಳಿಗೆ ನಡೆಸಲಾಗುತ್ತಿದೆ. ಒಂದಕ್ಕಿಂತ ಹೆಚ್ಚು ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು, ಯಾವುದಾದರೂ ಒಂದು ವಿಷಯದಲ್ಲಿ ಮಾತ್ರ ಕೆಸೆಟ್ ಪರೀಕ್ಷೆ ತೆಗೆದುಕೊಳ್ಳಬಹುದು. ಒಮ್ಮೆ ವಿಷಯ ಆಯ್ಕೆ ಮಾಡಿದ ನಂತರ ಬದಲಾವಣೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಪರೀಕ್ಷೆ ಬರೆಯಲು ಸ್ನಾತಕೋತ್ತರ ಪದವಿಯಲ್ಲಿ ಸಾಮಾನ್ಯ ವರ್ಗದವರು ಕನಿಷ್ಠ 55 ಅಂಕ, ಮೀಸಲು ವರ್ಗದ ಅಭ್ಯರ್ಥಿಗಳಿಗೆ ಶೇ.50 ಅಂಕಗಳ ಅಗತ್ಯವಿದೆ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್ ಗಮನಿಸಬಹುದಾಗಿದೆ.

