ಉಡುಪಿ ಶ್ರೀಕೃಷ್ಣ ಮಠಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜಕಾರಣಿ ಕೆ. ಅಣ್ಣಾಮಲೈ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಶ್ರೀ ಶೀರೂರು ಮಠದ ಪರ್ಯಾಯ ಶ್ರೀಪಾದರಾದ ಶ್ರೀ ಶ್ರೀ ವೇದವರ್ಧನ ತೀರ್ಥರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಮಠಕ್ಕೆ ಆಗಮಿಸಿದ ಅಣ್ಣಾಮಲೈ, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ರಾಮಮೂರ್ತಿ ಭಟ್ ಉಪಸ್ಥಿತರಿದ್ದರು.

