ಬೆಂಗಳೂರು: ಕಳೆದ ಎರಡು ದಿನಗಳಗ ಹಿಂದಷ್ಟೇ ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಮೊದಲಾದವುಗಳನ್ನು ಬ್ಯಾನ್ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದೆ.
ಒಂದು ವರ್ಷಗಳ ಕಾಲ ಮಾಡಲಾಗಿದ್ದ ಬ್ಯಾನ್ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ತನಗೆ ಯಾವ ಮಾಹಿತಿಯನ್ನೂ ನೀಡದೆ ಆದೇಶ ಹೊರಡಿಸಿರುವುದಾಗಿ ಅಧಿಕಾರಿಗಳ ವಿರುದ್ಧ ಸಿ ಎಂ ಗರಂ ಆಗಿದ್ದಾರೆ. ಬ್ಯಾನ್ ಆದಲ್ಲಿ ರೈತರು ನಷ್ಟ ಅನುಭವಿಸುವ ಸ್ಥಿತಿ ಎದುರಾಗಬಹುದು. ಈ ಹಿನ್ನೆಲೆ ರೈತರ ಹಿತದೃಷ್ಟಿಯಿಂದ ಬ್ಯಾನ್ ಆದೇಶ ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ನಿಯೋಗ ಗುಟ್ಕಾ, ಪಾನ್ ಮಸಾಲ ಬ್ಯಾನ್ ಮಾಡದಂತೆ ಸಿಎಂ ಅವರಿಗೆ ಮನವಿ ಸಲ್ಲಿಸಿತ್ತು. ನಿಷೇಧ ಆದೇಶದಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಅಡಿಕೆ ಬೆಳೆಗಾರರಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂದು ಮನವಿಯಲ್ಲಿ ಹೇಳಲಾಗಿತ್ತು.

