ಬೆಂಗಳೂರು: ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನುಬದ್ಧವಾಗಿ ನಡೆಸಲು ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವ ‘ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026’ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ.
ಯಾವುದೇ ಸಂಘ ಸಂಸ್ಥೆಗಳು ಶಾಲಾ, ಕಾಲೇಜು, ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿಗಳ ಆವರಣದಲ್ಲಿ ಕಾರ್ಯಕ್ರಮ ನಡೆಸಲು ಕಾನೂನಾತೇಮಕ ಅನುಮತಿ ಪಡೆಯುವುದು ಕಡ್ಡಾಯ ಎಂಬ ಕಾನೂನು ರೂಪಿಸಲು ಸರ್ಕಾರ ಮುಂದಾಗಿದೆ. ಈ ಮಳೆಗಾಲದ ಅಧಿವೇಶನದಲ್ಲಿ ಈ ಸಂಬಂಧ ವಿಧೇಯಕ ಮಂಡನೆಯಾಗುವ ಸಾಧ್ಯತೆಯೂ ಇದೆ.
2025ರಲ್ಲೇ ರಾಜ್ಯ ಸರ್ಕಾರವು ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಕಾನೂನುಬದ್ಧವಾಗಿ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ ಎಂದುಹೇಳಿ ಸ್ಪಷ್ಟ ಮಾರ್ಗಸೂಚಿ ಪ್ರಕಟಿಸಿತ್ತು. ಇದನ್ನು ಪುನಶ್ಚೇತನ ಸೇವಾ ಸಂಸ್ಥೆ ಎಂಬ ಸಂಘಟನೆಯು ಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಈ ನಿರ್ಧಾರವು ನಾಗರಿಕರ ಸಭೆ ಸೇರುವ ಮತ್ತು ಸಂಘ ಕಟ್ಟುವ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಿದೆ ಎಂದು ವಾದಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು.
ಸರ್ಕಾರ ಇದೀಗ ಈಸಂಬಂಧ ಪ್ರತ್ಯೇಕ ಕಾಯಿದೆ ಜಾರಿಗೆ ಸರ್ಕಾರ ನಿರ್ಧರಿಸಿದೆ.

