ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಬೆಂಗಳೂರಿನಲ್ಲೇ ಕಚೇರಿ ಹೊಂದಿರುವ ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS)
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಮ್ಯಾನೇಜರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 25
ಅರ್ಜಿ ಸಲ್ಲಿಸುವವರಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ, ಎಂ.ಇ., ಎಂ.ಟೆಕ್. ಕೋರ್ಸ್ ಮುಗಿಸಿರಬೇಕು. ಗರಿಷ್ಠ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಸಂಸ್ಥೆಯ ಅಧಿಕೃತ ವೆಬ್ ಸೈಟ್ ಆಗಿರುವ ncbs.res.in ಗೆ ಭೇಟಿ ನೀಡಿ, ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ತುಂಬಿ ಕಳುಹಿಸಬಹುದಾಗಿದೆ.

