ಬ್ರಹ್ಮಾವರ: ಪ್ರತಿಭಾವಂತ ಸಾಕ್ಸೋಫೋನ್ ವಾದಕಿ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ನೀಲಾವರ ಗ್ರಾಮದ ನಮೃತಾ ದೇವಾಡಿಗ (22) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ನಮೃತ ದೇವಾಡಿಗ ವೈಯಕ್ತಿಯ ಕಾರಣಕ್ಕೆ ಮನನೊಂದು ವಿಷ ಸೇವಿಸಿದ್ದರು. ನಂತರ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ ಎಂ ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಬೆಂಗಳೂರು ಮತ್ತು ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರ ತನಿಖೆಯ ಬಳಿಕವಷ್ಟೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಲಿದೆ.

