ಮಲ್ಪೆ: ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಬೋಟಿನಲ್ಲಿ ನಡೆದ ಗಲಾಟೆ ಬಳಿಕ ಅಭಿಷೇಕ್ ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗೋವಿಂದನನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆ.24ರ ರಾತ್ರಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿದ್ದು, ಆ.25ರ ಬೆಳಗಿನ ಜಾವ ಅಭಿಷೇಕ್ನನ್ನು ಕೊಲೆ ಮಾಡಿ ಗೋವಿಂದ ಪರಾರಿಯಾಗಿದ್ದ. ಮಾಹಿತಿ ಪಡೆದ ಪೊಲೀಸರು ಉಡುಪಿ ರೈಲು ನಿಲ್ದಾಣದಲ್ಲಿ ಹೈದರಾಬಾದ್ ಅಥವಾ ಮುಂಬೈಗೆ ತೆರಳಲು ಮುಂದಾಗಿದ್ದ ಆರೋಪಿಯನ್ನು ತಕ್ಷಣ ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ 103 BNS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

