ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೀನುಗಾರರ ಘಟಕದ ಮಹಿಳಾ ಮೀನುಗಾರ ವಿಭಾಗದ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ನಿರೀಕ್ಷಾ ಮೆಂಡನ್ ಅವರ ಪದ ಪ್ರಧಾನ ಸಮಾರಂಭ ಆಗಸ್ಟ್ 30ರಂದು ಮಲ್ಪೆಯ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಮೀನುಗಾರರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಬಿ. ಸುಣಗಾರ ಉಪಸ್ಥಿತರಿರುವರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳಾ ಮೀನುಗಾರರು ಭಾಗವಹಿಸಲಿದ್ದಾರೆ ಎಂದು ನಿರೀಕ್ಷಾ ಮೆಂಡನ್ ತಿಳಿಸಿದ್ದಾರೆ.

