ಬೆಂಗಳೂರು: ವಾಲ್ಮೀಕಿ ನಿಗಮದ ಅನುದಾನ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸರ್ಕಾರದ ಮೊದಲ ಪತನವಾದಂತಾಗಿದೆ.
ಈಗಾಗಲೇ ಸಚಿವ ನಾಗೇಂದ್ರ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದು, ಇದೀಗ ಅಧಿಕೃತ ಘೋಷಣೆಯಾಗಿದೆ.
ಆರೋಪ ಹೊತ್ತಿರುವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿದ್ದಕ್ಕೆ ವಿರೋಧ ಪಕ್ಷ ಬಿಜೆಪಿ ತೀವ್ರ ಆಕ್ಷೇಪ ಪಡಿಸಿದ್ದು ಅಧಿವೇಶನದ ಒಳಗೂ, ಹೊರಗೂ ಭಾರೀ ಹೋರಾಟ ನಡೆಸಿತ್ತು. ಅಲ್ಲದೆ ಸೆಪ್ಟಂಬರ್ ನಲ್ಲಿ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಘೋಷಿಸಿದ್ದು ಸರ್ಕಾರಲ್ಲೇ ತೀವ್ರ ಮುಜುಗರ ಉಂಟಾಗಿತ್ತು.

