ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯುತ್ತಿರುವ ಫಲಾನುಭವಿಗಳಿಗೆ ಆಧಾರ್ ಹಾಗೂ ವೋಟರ್ ಐಡಿ ಲಿಂಕ್ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮೊಬೈಲ್ ಸಂಖ್ಯೆ ಆಧಾರ್ಗೆ ಲಿಂಕ್ ಆಗಿರಬೇಕು. ಬ್ಯಾಂಕ್ ಖಾತೆಯೊಂದಿಗೂ ಆಧಾರ್ ಲಿಂಕ್ ಮಾಡಿಸುವುದು ಅಗತ್ಯವಾಗಿದೆ. ಜೊತೆಗೆ, ಫಲಾನುಭವಿಗಳ ಆಧಾರ್ ಮತ್ತು ವೋಟರ್ ಐಡಿ ಲಿಂಕ್ ಆಗಿದ್ದರೆ ಮಾತ್ರ ಯೋಜನೆಯ ಹಣ ಸಿಗಲಿದೆ.
ಈಗಾಗಲೇ ನಡಯುತ್ತಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಶೀಲನೆ ಪ್ರಕ್ರಿಯೆ ಹಿನ್ನೆಲೆಯಲ್ಲಿ, ಫಲಾನುಭವಿಗಳು ತಮ್ಮ ಆಧಾರ್ ಹಾಗೂ ಬ್ಯಾಂಕ್ ಖಾತೆಯ ವಿವರಗಳನ್ನು ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.
ಇದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗತ್ಯ ಪರಿಶೀಲನೆ ನಡೆಸುತ್ತಿದ್ದು, ಫಲಾನುಭವಿಗಳು ತಮ್ಮ ದಾಖಲೆಗಳಲ್ಲಿ ಯಾವುದೇ ದೋಷವಿದ್ದರೆ ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

