ಕುಂದಾಪುರ: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿರುವ ಆಕ್ಷೇಪಣೆಗಳ ಸಂಪೂರ್ಣ ಪ್ರತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಕುಂದಾಪುರ ತಾಲೂಕು ರೈತ ಸಂಘದ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ ಏಳನೇ ಕರಡು ಅಧಿಸೂಚನೆ ಹೊರಡಿಸಿದ್ದು, ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದೆ. ಆದರೆ ಪಶ್ಚಿಮ ಘಟ್ಟ ಪ್ರದೇಶದ ರೈತರ ಪ್ರಮುಖ ಬೇಡಿಕೆಯಾದ ಭೌತಿಕ ಸರ್ವೇ ಕಾರ್ಯ ಇನ್ನೂ ನಡೆದಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂಸದರು, ಶಾಸಕರು ಕೇವಲ ಸಭೆ ನಡೆಸುವುದನ್ನು ಬಿಟ್ಟು, ಸರ್ಕಾರ ಸಲ್ಲಿಸಿರುವ ಆಕ್ಷೇಪಣೆಗಳನ್ನು ಜನರಿಗೆ ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

