ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕುಸಿತ ಹಾಗೂ ಪ್ರವಾಹದ ಬಳಿಕ ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ. ದುರಂತದಲ್ಲಿ ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದ್ದು, 4,247 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ.
ಈವರೆಗೆ ಪ್ರವಾಹ ಪೀಡಿತ ಪ್ರದೇಶಗಳಿಂದ ಸುಮಾರು 9,500 ಮಂದಿಯನ್ನು ರಕ್ಷಿಸಲಾಗಿದೆ. ಜಲವಿದ್ಯುತ್ ಯೋಜನೆಗಳಲ್ಲಿದ್ದ 933 ಕಾರ್ಮಿಕರು ನಾಪತ್ತೆಯಾಗಿದ್ದು, 600ಕ್ಕೂ ಹೆಚ್ಚು ಮಂದಿ ಸುರಂಗಗಳಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಥರ್ಮಲ್ ಡ್ರೋನ್ಗಳ ಮೂಲಕ ಶೋಧ ನಡೆಸಲಾಗುತ್ತಿದ್ದು, ರಕ್ಷಣಾ ಉಪಕರಣಗಳ ಕೊರತೆ ಕಾರ್ಯಾಚರಣೆಗೆ ಸವಾಲಾಗಿದೆ. ಭಾರತ ಮತ್ತು ಚೀನಾ ಕೂಡ ನೇಪಾಳದ ರಕ್ಷಣಾ ಪಡೆಗಳಿಗೆ ನೆರವು ನೀಡುತ್ತಿವೆ.

