ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ ಬೆಳವಣಿಗೆ ಬೆನ್ನಲ್ಲೇ ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಮುಂದಿಟ್ಟುಕೊಂಡು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸುನಿಲ್ ಕುಮಾರ್ ಅವರ ಕಚೇರಿಗೆ ಸ್ಟಿಕರ್ ಅಂಟಿಸಲು ತೆರಳುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಮಾರ್ಗಮಧ್ಯೆಯೇ ತಡೆದು ವಶಕ್ಕೆ ಪಡೆದರು. ಈ ವೇಳೆ ಸರ್ವಜ್ಞ ವೃತ್ತದಲ್ಲಿ ಕೆಲಕಾಲ ಹೈಡ್ರಾಮ ನಡೆಯಿತು. ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

