ಮಂಗಳೂರು: ಈ ಬಾರಿ ಮಂಗಳೂರು ದಸರಾವನ್ನು ಪಾವಿತ್ರ್ಯ, ಶ್ರದ್ಧೆ ಮತ್ತು ಭಕ್ತಿಗೆ ಧಕ್ಕೆಯಾಗದಂತೆ ಅತ್ಯಂತ ವೈಭವದಿಂದ ಆಚರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಸರಾ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ನಗರದ ಸ್ವಚ್ಛತೆ, ಬೀದಿ ದೀಪ, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಸಮರ್ಪಕವಾಗಿರುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮೆರವಣಿಗೆ ವೇಳೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವುದು, ರಸ್ತೆ ಗುಂಡಿ ಮುಚ್ಚುವುದು ಹಾಗೂ ದಸರಾ ಸಂದರ್ಭದಲ್ಲಿ ಬಸ್ ಸಂಚಾರದ ಅವಧಿ ವಿಸ್ತರಿಸುವಂತೆ ಸಲಹೆ ನೀಡಿದರು. ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ಗಳ ವ್ಯವಸ್ಥೆಗೂ ಸೂಚನೆ ನೀಡಲಾಗಿದೆ.

