ಮಣಿಪಾಲ: ಪಶ್ಚಿಮ ವಲಯದ 8ನೇ ಪೊಲೀಸ್ ಕರ್ತವ್ಯ ಕೂಟದ ಸಮಾರೋಪ ಸಮಾರಂಭ ಮಣಿಪಾಲ ಮಾಹೆಯ ಡಾ. ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ 20 ವಿಭಾಗಗಳ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಅತೀ ಹೆಚ್ಚು ಪದಕಗಳನ್ನು ಗೆದ್ದ ಉಡುಪಿ ಜಿಲ್ಲೆ ಸರ್ವಾಂಗೀಣ ತಂಡ ಪ್ರಶಸ್ತಿ ಪಡೆದುಕೊಂಡಿತು. ಉಡುಪಿಯ ಪೊಲೀಸ್ ಶ್ವಾನ ‘ಸ್ನೈಪರ್’ ಅತ್ಯುತ್ತಮ ಶ್ವಾನ ಪ್ರಶಸ್ತಿ ಪಡೆದಿದ್ದು, ಹ್ಯಾಂಡ್ಲರ್ ಹರೀಶ್ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.
ಸಮಾರಂಭದಲ್ಲಿ ವಿಜೇತರಿಗೆ ಅಭಿನಂದನೆ ಸಲ್ಲಿಸಿ, ವೈಜ್ಞಾನಿಕ ವಿಧಾನಗಳ ಮೂಲಕ ತನಿಖೆ ನಡೆಸಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲು ಶ್ರಮಿಸುವಂತೆ ಪೊಲೀಸ್ ಉಪಮಹಾನಿರೀಕ್ಷಕ ಚೇತನ್ ಆರ್. ಕರೆ ನೀಡಿದರು.

