ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಬೀದಿಬದಿ ವ್ಯಾಪಾರ ತೆರವುಗೊಳಿಸಲು ಪಾಲಿಕೆ ಆಯುಕ್ತರು ಸೂಚನೆ ನೀಡಿದ್ದಾರೆ.
ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ವ್ಯಾಪಾರದಿಂದ ವಾಹನ ಸಂಚಾರ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಪಾಲಿಕೆಯಿಂದ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರ ಪಡೆದಿರುವ ವ್ಯಾಪಾರಿಗಳನ್ನು ಹೊರತುಪಡಿಸಿ, ಇತರರು ಸ್ವಯಂ ವ್ಯಾಪಾರ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

