ಮಂಗಳೂರು: ಅಷ್ಟಮಿ ಪ್ರಯುಕ್ತ ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಮನಕಲಕುವ ಘಟನೆ ನಡೆದಿದೆ.
ಭಜನೆ ಮಾಡುತ್ತಿದ್ದ ವೇಳೆ ತೋಕೂರು ನಿವಾಸಿ 38 ವರ್ಷದ ಶ್ರೀನಾಥ್ ಶೆಟ್ಟಿಗಾರ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಶ್ರೀನಾಥ್, ಅಷ್ಟಮಿ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದ್ದರು. ಸ್ಥಳೀಯ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದ ಅವರು, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು ಎನ್ನಲಾಗಿದೆ.
ಶ್ರೀನಾಥ್ ಅವರ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

