ಉಡುಪಿ: ಕೃಷ್ಣ ಜನ್ಮಾಷ್ಟಮಿ ಸಂಭ್ರಮದ ನಡುವೆಯೇ ಉಡುಪಿಯಲ್ಲಿ ಕೇರಳದ ಓಣಂ ಹಬ್ಬವೂ ಕಳೆಗಟ್ಟಿತು. ಕೇರಳ ಸಮಾಜಂ ಉಡುಪಿ ವತಿಯಿಂದ ಅಂಬಾಗಿಲಿನ ಅಮೃತ್ ಗಾರ್ಡನ್ನಲ್ಲಿ ಎರಡನೇ ವರ್ಷದ ಓಣಂ ಸಂಭ್ರಮಾಚರಣೆ ನಡೆಯಿತು.
ಮಲಯಾಳಂ ನಟಿ ನೀನಾ ಕುರುಪ್ ಕಾರ್ಯಕ್ರಮ ಉದ್ಘಾಟಿಸಿದರು. ತಿರುವಾದಿರ, ಮೊಹಿಣಿಯಾಟ್ಟಂ ನೃತ್ಯ, ಸಂಗೀತ, ಫ್ಯಾಷನ್ ಶೋ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳು ಗಮನ ಸೆಳೆದವು.
ಬಾಲ ಗಾಯಕಿ ರಾನಿಯಾ ರಫೀಕ್ ಅವರ ಗಾಯನ ವಿಶೇಷ ಆಕರ್ಷಣೆಯಾಗಿತ್ತು. ಕೇರಳದ ಸಾಂಪ್ರದಾಯಿಕ ಆಹಾರ ವೈವಿಧ್ಯ ಸವಿಯಲು ಉಡುಪಿ ಜನತೆ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

