ಉಡುಪಿ: ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕಡಲ್ಕೊರೆತ ಸಮಸ್ಯೆಯನ್ನು ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸಿ, ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.
ಕಡಲ್ಕೊರೆತದಿಂದ ಸ್ಥಳೀಯರ ಬದುಕಿನ ಜತೆಗೆ ಕರಾವಳಿ ಪ್ರವಾಸೋದ್ಯಮಕ್ಕೂ ಹೊಡೆತ ಬೀಳುವ ಆತಂಕವಿದೆ ಎಂದರು.
ಇದೇ ವೇಳೆ ಕಡಲತೀರದಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣ ಹಾಗೂ ಸರ್ಕಾರಿ ಜಾಗ ಅತಿಕ್ರಮಣಕ್ಕೆ ಅವಕಾಶ ನೀಡುವುದಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

