ಕುಂದಾಪುರ: ತ್ರಾಸಿ ಬೀಚ್ ಅಭಿವೃದ್ಧಿಗೆ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಮೂರು ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಬೀಚ್ಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವರು, ಸ್ಕೈವಾಕ್ ಹಾಗೂ ಸಾಹಸ ಉದ್ಯಾನವನ ಸೇರಿದಂತೆ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದರು.

