ಉಡುಪಿ: ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆಯಲ್ಲಿ ಕಾಲುದಾರಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ.
ಇಂದು ಬೆಳಗ್ಗೆ ಸ್ಥಳೀಯರು ಕಾಲುದಾರಿಯಲ್ಲಿ ತೆರಳುತ್ತಿದ್ದ ವೇಳೆ ಮಗು ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ತಪಾಸಣೆಯಲ್ಲಿ ಮಗುವಿನಲ್ಲಿ ಹೃದಯ ಬಡಿತ ಇರುವುದು ದೃಢಪಟ್ಟಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾಹಿತಿ ತಿಳಿದು ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಗುವನ್ನು ಯಾರು ಬಿಟ್ಟು ಹೋಗಿದ್ದಾರೆ ಎಂಬುದರ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

