ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಕೃಷ್ಣನ ಮಣ್ಣಿನ ಮೂರ್ತಿ ಕೈಯಿಂದ ಬಿದ್ದು ಭಗ್ನವಾದ ಘಟನೆ ನಡೆದಿದೆ.
ಚಾತುರ್ಮಾಸದ ಹಿನ್ನೆಲೆಯಲ್ಲಿ ನಿನ್ನೆ ವಿಟ್ಲಪಿಂಡಿ ಉತ್ಸವದ ಅಂಗವಾಗಿ ಕೃಷ್ಣನ ಮೃಣ್ಮಯ ಮೂರ್ತಿಯ ರಥೋತ್ಸವ ನೆರವೇರಿಸಲಾಗಿತ್ತು. ಉತ್ಸವದ ಬಳಿಕ ರಥಾರೂಢವಾಗಿದ್ದ ಕೃಷ್ಣನ ಮೂರ್ತಿಯನ್ನು ಮಧ್ವ ಸರೋವರದಲ್ಲಿ ಮುಳುಗಿಸಲು ಕೊಂಡೊಯ್ಯುವ ವೇಳೆ ಈ ಅವಘಡ ಸಂಭವಿಸಿದೆ.
ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರ ಕೈಯಿಂದ ಮೂರ್ತಿ ಕೆಳಗೆ ಬಿದ್ದು ಭಗ್ನವಾಗಿದೆ. ಬಳಿಕ ವಿಧಿವಿಧಾನಗಳೊಂದಿಗೆ ಮೂರ್ತಿಯನ್ನು ಮಧ್ವ ಸರೋವರಕ್ಕೆ ಕೊಂಡೊಯ್ಯಲಾಯಿತು.

