ನವದೆಹಲಿ: ಎಲ್ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ಗೆ ಇದ್ದ 45 ದಿನಗಳ ಅಂತರವನ್ನು ಕೇಂದ್ರ ಸರ್ಕಾರ 25 ದಿನಗಳಿಗೆ ಇಳಿಸಿದೆ. ಇನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳ ಎಲ್ಲಾ ಗೃಹಬಳಕೆ ಎಲ್ಪಿಜಿ ಗ್ರಾಹಕರು 25 ದಿನಕ್ಕೊಮ್ಮೆ ಸಿಲಿಂಡರ್ ಬುಕ್ ಮಾಡಬಹುದು. ಈ ಬದಲಾವಣೆ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ತಿಳಿಸಿದ್ದಾರೆ.
ಎಲ್ಪಿಜಿ ಪೂರೈಕೆ ಪರಿಸ್ಥಿತಿ ಸುಧಾರಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

