ಸುಳ್ಯ: ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ನಡೆಸಿದ ಪೊಲೀಸರು, ಪುತ್ತೂರು ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಎಂಬಾತನನ್ನು ಸೆಪ್ಟೆಂಬರ್ 7ರಂದು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

