ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಮತ್ತೊಬ್ಬ ವ್ಯಕ್ತಿಯಂತೆ ನಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪದಡಿ ಉಡುಪಿ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿ ನೋಮಾನ್ಗೆ ಜಾಮೀನು ನೀಡುವ ವೇಳೆ, ಫಾರೂಕ್ ಎಂಬಾತ ಮತ್ತೊಬ್ಬರ ಆಧಾರ್ ವಿವರಗಳನ್ನು ನಕಲಿಯಾಗಿ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಉಮ್ಮರ್ ಫಾರೂಕ್ ಬಂಟ್ವಾಳ ಮತ್ತು ನಿಶಾಂತ್ ಕುಮಾರ್ ಮಂಗಳೂರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಬ್ಬರೂ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಪಿ. ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ರತ್ನಾಕರ ಕೆ. ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ.

