ಉಡುಪಿ: ಕಟಪಾಡಿ ಅಂಡರ್ಪಾಸ್ ಬಳಿ ಪಿಕಪ್ ವಾಹನದ ಹಿಂಬದಿಯ ಬಾಡಿಯಲ್ಲಿ ಸುಮಾರು 8ರಿಂದ 10 ಮಕ್ಕಳನ್ನು ನಿಲ್ಲಿಸಿಕೊಂಡು ಅಪಾಯಕಾರಿಯಾಗಿ ಚಾಲನೆ ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಬಗ್ಗೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು, KL 33 B 7463 ನೋಂದಣಿಯ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ವಾಹನ ಚಾಲಕನ ವಿರುದ್ಧ BNS ಹಾಗೂ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

